ಭಾರತ ಟೆಸ್ಟ್ ತಂಡದಲ್ಲಿ ಪೃಥ್ವಿ ಶಾಗೆ ಸ್ಥಾನ

0
PC: Prithvi Shaw/Facebook

ಬೆಂಗಳೂರು: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಮುಂಬೈನ ಯುವ ಬ್ಯಾಟ್ಸ್ ‌ಮನ್ ಪೃಥ್ವಿ ಶಾ ಇದೇ ಮೊದಲ ಬಾರಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೈದರಾಬಾದ್‌ನ ಆಟಗಾರ ಹನುಮ ವಿಹಾರಿ ಕೂಡ ಭಾರತ ತಂಡದಲ್ಲಿ ಮೊದಲ ಬಾರಿ ಸ್ಥಾನ ಸಂಪಾದಿಸಿದ್ದಾರೆ. ಮೊದಲೆರಡು ಟೆಸ್ಟ್ ಗಳಲ್ಲಿ ಎಡವಿದ್ದ ಅನುಭವಿ ಆರಂಭಿಕ ಬ್ಯಾಟ್ಸ್‌ಮನ್ ಮುರಳಿ ವಿಜಯ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಇಂಗ್ಲೆಂಡ್ ವಿರುದ್ಧದ 4 ಮತ್ತು 5ನೇ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ
ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್ ರಾಹುಲ್, ಶಿಖರ್ ಧವನ್, ಪೃಥ್ವಿ ಶಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ರವೀಂದ್ರ ಜಡೇಜಾ, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ಜಸ್‌ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಹನುಮ ವಿಹಾರಿ.

LEAVE A REPLY

Please enter your comment!
Please enter your name here

1 × one =