ಅಟ್ಯಾಕರ್ಸ್ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್: ಥಾಮ್ಸನ್ ರಾಯಟರ್ಸ್ ಚಾಂಪಿಯನ್ಸ್

0

ಬೆಂಗಳೂರು, ಸೆಪ್ಟೆಂಬರ್ 11: ಬೆಂಗಳೂರಿನ ಅಟ್ಯಾಕರ್ಸ್ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ನಡೆದ ಅಟ್ಯಾಕರ್ಸ್ ಕಪ್ 4ನೇ ಆವೃತ್ತಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ಥಾಮ್ಸನ್ ರಾಯಟರ್ಸ್ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿದೆ. ಕಾನ್ಸೆಂಟ್ರಿಕ್ಸ್ ತಂಡ ರನ್ನರ್ಸ್ ಅಪ್ ಸ್ಥಾನ ಪಡೆದಿದೆ.
ಎಚ್‌ಎಂಟಿ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಕಾನ್ಸೆಂಟ್ರಿಕ್ಸ್ ತಂಡ ನಿಗದಿತ 8 ಓವರ್‌ಗಳಲ್ಲಿ 48 ರನ್ ಕಲೆ ಹಾಕಿತು. ಗುರಿ ಬೆನ್ನಟ್ಟಿದ ಥಾಮ್ಸನ್ ರಾಯಟರ್ಸ್ ತಂಡ ಕೊನೆಯ ಓವರ್‌ನಲ್ಲಿ ಗುರಿ ತಲುಪಿ ಪ್ರಶಸ್ತಿ ಗೆದ್ದುಕೊಂಡಿತು.

LEAVE A REPLY

Please enter your comment!
Please enter your name here

4 + 11 =