ಅಧ್ಯಕ್ಷರ ಇಲೆವೆನ್‌ಗೆ ಕರುಣ್ ನಾಯಕ, ಮಯಾಂಕ್‌ಗೆ ಸ್ಥಾನ

0
PC: Karun Nair/Twitter

ಬೆಂಗಳೂರು, ಸೆಪ್ಟೆಂಬರ್ 21: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡು ದಿನಗಳ ಅಭ್ಯಾಸ ಪಂದ್ಯಕ್ಕೆ ಪ್ರಕಟಿಸಲಾಗಿರುವ ಬಿಸಿಸಿಐ ಅಧ್ಯಕ್ಷರ ಇಲೆವೆನ್ ತಂಡವನ್ನು ಕರ್ನಾಟಕದ ಬ್ಯಾಟ್ಸ್‌ಮನ್ ಕರುಣ್ ನಾಯರ್ ಮುನ್ನಡೆಸಲಿದ್ದಾರೆ.
ಈ ಪಂದ್ಯ ಸೆಪ್ಟೆಂಬರ್ 29 ಮತ್ತು 30ರಂದು ವಡೋದರದಲ್ಲಿ ನಡೆಯಲಿದ್ದು, ಕರ್ನಾಟಕದ ರನ್ ಮಷಿನ್ ಮಯಾಂಕ್ ಅಗರ್ವಾಲ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಇವರಿಬ್ಬರು ಸೆಪ್ಟೆಂಬರ್ 30ರಂದು ನಡೆಯಲಿರುವ ವಿದ‘ರ್ ವಿರುದ್ಧದ ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

PC: Mayank/Twitter

ಅಲ್ಲದೆ ಕರುಣ್ ಸಾರಥ್ಯದ ತಂಡದಲ್ಲಿ ಮುಂಬೈ ಬ್ಯಾಟ್ಸ್‌ಮನ್‌ಗಳಾದ ಶ್ರೇಯಸ್ ಅಯ್ಯರ್ ಮತ್ತು ಪೃಥ್ವಿ ಶಾ ಕೂಡ ಸ್ಥಾನ ಗಳಿಸಿದ್ದಾರೆ.
ಇತ್ತೀಚೆಗೆ ಅಂತ್ಯಗೊಂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಐದೂ ಪಂದ್ಯಗಳಲ್ಲಿ ಕರುಣ್ ನಾಯರ್ ಅವಕಾಶ ವಂಚಿತರಾಗಿದ್ದರು. 5ನೇ ಟೆಸ್ಟ್‌ನಲ್ಲಿ ಕರುಣ್ ನಾಯರ್ ಅವರಿಗೆ ಅವಕಾಶ ತಪ್ಪಿಸಿ ಮೊದಲ ಬಾರಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದ ಹೈದರಾಬಾದ್‌ನ ಹನುಮ ವಿಹಾರಿ ಅವರನ್ನು ಆಡಿಸಲಾಗಿತ್ತು. ಇದಕ್ಕೆ ಮಾಜಿ ನಾಯಕ ಸುನಿಲ್ ಗವಾಸ್ಕರ್ ಸೇರಿದಂತೆ ಭಾರಿ ಟೀಕೆ ವ್ಯಕ್ತವಾಗಿತ್ತು.

ಮಂಡಳಿ ಅಧ್ಯಕ್ಷರ ಇಲೆವೆನ್ ತಂಡ: ಕರುಣ್ ನಾಯಕ್(ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಹನುಮ ವಿಹಾರಿ, ಶ್ರೇಯಸ್ ಅಯ್ಯರ್, ಅಂಕಿತ್ ಬಾವ್ನೆ, ಇಶಾನ್ ಕಿಶನ್(ವಿಕೆಟ್ ಕೀಪರ್), ಜಲಜ್ ಸಕ್ಸೇನ, ಸೌರಭ ಕುಮಾರ್, ಬಸಿಲ್ ಥಂಪಿ, ಆವೇಶ್ ಖಾನ್, ಕೆ.ವಿಘ್ನೇಶ್, ಇಶಾನ್ ಪೊರೆಲ್.

LEAVE A REPLY

Please enter your comment!
Please enter your name here

13 − 1 =