ಆಸೀಸ್ ವಿರುದ್ಧದ ದ್ವಿತೀಯ ಟೆಸ್ಟ್: ರೋಹಿತ್, ಅಶ್ವಿನ್ ಔಟ್

0

ಪರ್ತ್, ಡಿಸೆಂಬರ್13: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಾಳೆ ಆರಂಭವಾಗಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಮತ್ತು ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ.

ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯಗಲ್ಲಿ ಫೀಲ್ಡಿಂಗ್ ನಡೆಸುವ ವೇಳೆ ರೋಹಿತ್ ಶರ್ಮಾ ಬೆನ್ನಿನ ಕೆಳಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಅಶ್ವಿನ್ ಕಿಬ್ಬೊಟ್ಟೆಯ ನೋವಿನಿಂದ ಬಳಲುತ್ತಿದ್ದಾರೆ. 

PC:BCCI

ಹೀಗಾಗಿ ಇವರ ಸ್ಥಾನದಲ್ಲಿ ಹನುಮ ವಿಹಾರಿ ಮತ್ತು ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಆಡುವುದು ಖಚಿತವಾಗಿದೆ. ಯುವ ಆರಂಭಿಕ ಬ್ಯಾಟ್ಸ್ ಮನ್ ಪೃಥ್ವಿ ಶಾ ಕಾಲಿನ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಮುರಳಿ ವಿಜಯ್ ಮತ್ತು ಕೆ.ಎಲ್ ರಾಹುಲ್ ಜೋಡಿಯೇ ಇನ್ನಿಂಗ್ಸ್ ಆರಂಭಿಸಲಿದೆ.

2ನೇ ಟೆಸ್ಟ್ ಪಂದ್ಯಕ್ಕೆ ಭಾರತದ 13 ಸದಸ್ಯ ತಂಡ: ವಿರಾಟ್ ಕೊಹ್ಲಿ(ನಾಯಕ), ಕೆ.ಎಲ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ಉಪನಾಯಕ), ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್.

LEAVE A REPLY

Please enter your comment!
Please enter your name here

2 + sixteen =