ಆಸ್ಟ್ರೇಲಿಯಾ ವಿರುದ್ಧದ ಪ್ರಥಮ ಟೆಸ್ಟ್: ಭಾರತದ 12ರ ಬಳಗ ಪ್ರಕಟ

0

ಅಡಿಲೇಡ್, ಡಿಸೆಂಬರ್ 5: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಾಳೆ(ಗುರುವಾರ) ಅಡಿಲೇಡ್ ಓವಲ್ ಮೈದಾನದಲ್ಲಿ ಆರಂಭವಾಗಲಿರುವ ಪ್ರಥಮ ಟೆಸ್ಟ್ ಪಂದ್ಯಕ್ಕೆ ಭಾರತ ತನ್ನ 12ರ ಬಳಗವನ್ನು ಪ್ರಕಟಿಸಿದೆ.

ನಾಲ್ವರು ಬೌಲರ್ಸ್ ತಂತ್ರದೊಂದಿಗೆ ಭಾರತ ಆಡಲಿದ್ದು, ವೇಗಿಗಳಾದ ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಏಕೈಕ ಸ್ಪಿನ್ನರ್ ಆಗಿ ಕಣಕ್ಕಿಳಿಯಲಿದ್ದಾರೆ. 

PC: BCCI

ಆರಂಭಿಕರಾಗಿ ಕೆ.ಎಲ್ ರಾಹುಲ್ ಮತ್ತು ಮುರಳಿ ವಿಜಯ್, 3ನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ, 4ನೇ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ, 5ನೇ ಕ್ರಮಾಂಕದಲ್ಲಿ ಉಪನಾಯಕ ಅಜಿಂಕ್ಯ ರಹಾನೆ, 6ನೇ ಕ್ರಮಾಂಕದಲ್ಲಿ ಹನುಮ ವಿಹಾರಿ ಅಥವಾ ರೋಹಿತ್ ಶರ್ಮಾ, 7ನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ಆಡಲಿದ್ದಾರೆ.

ಮತ್ತೊಂಡೆದೆ ಆಸ್ಟ್ರೇಲಿಯಾ ಕೂಡ ತನ್ನ ಅಂತಿಮ 11ರ ತಂಡವನ್ನು ಪ್ರಕಟಿಸಿದ್ದು, ಆರಂಭಿಕ ಬ್ಯಾಟ್ಸ್ ಮನ್ ಮಾರ್ಕಸ್ ಹ್ಯಾರಿಸ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಲಿದ್ದಾರೆ.

ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 5.30ಕ್ಕೆ ಆರಂಭವಾಗಲಿದೆ.

ಭಾರತದ ಸಂಭಾವ್ಯ ಇಲೆವೆನ್: ಕೆ.ಎಲ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ/ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ಆರ್.ಅಶ್ವಿನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾದ ಪ್ಲೇಯಿಂಗ್ ಇಲೆವೆನ್: ಆ್ಯರೋನ್ ಫಿಂಚ್, ಮಾರ್ಕಸ್ ಹ್ಯಾರಿಸ್, ಉಸ್ಮಾನ್ ಖವಾಜ, ಶಾನ್ ಮಾರ್ಷ್, ಟ್ರಾವಿಸ್ ಹೆಡ್, ಟಿಮ್ ಪೇಯ್ನ್(ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್, ನೇಥನ್ ಲಯಾನ್, ಜೋಶ್ ಹೇಝಲ್ವುಡ್.

LEAVE A REPLY

Please enter your comment!
Please enter your name here

seventeen + 7 =