ಐಪಿಎಲ್-12: ಕೊಡಗಿನ ಕಲಿ ಪಾಸ್, ಮಂಗಳೂರು ಹುಡುಗ ಫೇಲ್..!

0
PC: IPL/Twitter

ಕೋಲ್ಕತ್ತ, ಮಾರ್ಚ್ 27: ಕೊಡಗಿನ ಕಲಿ ರಾಬಿನ್ ಉತ್ತಪ್ಪ ಐಪಿಎಲ್-12 ಟೂರ್ನಿಯಲ್ಲಿ ಮೊದಲ ಅರ್ಧಶತಕ ಬಾರಿಸಿದ್ದಾರೆ. ಕೋಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಉತ್ತಪ್ಪ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸ್ಫೋಟಕ ಅಜೇಯ 67 ರನ್ ಸಿಡಿಸಿದರು. ಆದರೆ ಕಿಂಗ್ಸ್ ಇಲೆವೆನ್ ಪರ ಆಡುತ್ತಿರುವ ಮತ್ತೊಬ್ಬ ಕನ್ನಡಿಗ ಕೆ.ಎಲ್ ರಾಹುಲ್ ಕೇವಲ 1 ರನ್ ಗಳಿಸಿ ಔಟಾದರು.

3ನೇ ಕ್ರಮಾಂಕದಲ್ಲಿ ಕ್ರೀಸ್ ಗಿಳಿದ ಉತ್ತಪ್ಪ 6 ಬೌಂಡರಿಗಳು ಮತ್ತು 2 ಭರ್ಜರಿ ಸಿಕ್ಸರ್ಸ್ ನೆರವಿನಿಂದ ತಮ್ಮ ಇನ್ನಿಂಗ್ಸ್ ಕಟ್ಟಿದರು. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ ಉತ್ತಪ್ಪ 27 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 35 ರನ್ ಗಳಿಸಿದ್ದರು.

33 ವರ್ಷದ ರಾಬಿನ್ ಉತ್ತಪ್ಪ ಐಪಿಎಲ್ ನಲ್ಲಿ ಒಟ್ಟು 167 ಪಂದ್ಯಗಳನ್ನಾಡಿದ್ದು, 24 ಅರ್ಧಶತಕಗಳ ಸಹಿತ 4231 ರನ್ ಗಳಿಸಿ, ಅತಿ ಹೆಚ್ಚು ರನ್ ಗಳಿಸಿದವರ ಸಾಲಿನಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸುರೇಶ್ ರೈನಾ(5034 ರನ್), ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ(4954 ರನ್) ಮತ್ತು ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ರೋಹಿತ್ ಶರ್ಮಾ(4507 ರನ್) ಮೊದಲ ಮೂರು ಸ್ಥಾನಗಳಲ್ಲಿದ್ದಾರೆ.

ಮುಂಬೈ ಇಂಡಿಯನ್ಸ್ ಪರ ಮೊದಲ ಬಾರಿ ಆಡಿದ್ದ ಉತ್ತಪ್ಪ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪುಣೆ ವಾರಿಯರ್ಸ್ ತಂಡದ ಪರ ಆಡಿದ್ದರು. ಕಳೆದ ಕೆಲ ವರ್ಷಗಳಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಪರ ಆಡುತ್ತಿದ್ದಾರೆ.

LEAVE A REPLY

Please enter your comment!
Please enter your name here

5 × 5 =