ನಂ.18 ಮೋಡಿ: ವಿರಾಟ್ ಕೊಹ್ಲಿ, ಮಂಧಾನ ನಂ.1

0
PC: Twitter

ಬೆಂಗಳೂರು, ಫೆಬ್ರವರಿ 2: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಮಹಿಳಾ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಪುರುಷರ ಹಾಗೂ ಮಹಿಳಾ ವಿಭಾಗದಲ್ಲಿ ನಂ.1 ಪಟ್ಟ ಅಲಂಕರಿಸಿದ್ದಾರೆ.

ವಿರಾಟ್ ಕೊಹ್ಲಿ ಈ ಹಿಂದೆಯೇ ನಂ.1 ಸ್ಥಾನದಲ್ಲಿದ್ದರು. ಇದೀಗ ಸ್ಮೃತಿ ಮಂಧಾನ ಕೂಡ ನಂ.1 ಸ್ಥಾನಕ್ಕೇರಿದ್ದಾರೆ. ಇವರಿಬ್ಬರ ಜರ್ಸಿ ನಂ.18 ಅನ್ನೋದು ವಿಶೇಷ. ರನ್ ಮಷಿನ್ ವಿರಾಟ್ ಕೊಹ್ಲಿ 899 ರೇಟಿಂಗ್ ಅಂಕಗಳೊಂದಿಗೆ ನಂ.1 ಸ್ಥಾನದಲ್ಲಿದ್ದರೆ, ಸ್ಮೃತಿ ಮಂಧಾನ 751 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಎಲೀಸ್ ಪೆರ್ರಿ 681 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಮೆಗ್ ಲ್ಯಾನಿಂಗ್(675) 3ನೇ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲೂ 922 ರೇಟಿಂಗ್ ಅಂಕಗಳೊಂದಿಗೆ ನಂ.1 ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಐಸಿಸಿ Ranking: ಪೂರ್ಣ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here

1 × 4 =