ಫುಟ್ಬಾಲ್: ರಾಷ್ಟ್ರ ಮಟ್ಟಕ್ಕೆ ಬೆಂಗಳೂರು, ಮೈಸೂರು ತಂಡಗಳು

0

ಮಂಗಳೂರು, ಸೆಪ್ಟೆಂಬರ್ 29: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆಯ ಸೇಂಟ್ ಜೋಸೆಫ್ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷದೊಳಗಿನವರ ಫುಟ್ಬಾಲ್ ಟೂರ್ನಿಯಲ್ಲಿ ಬೆಂಗಳೂರು ದಕ್ಷಿಣ ವಿಭಾಗೀಯ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.
ಫೈನಲ್ ಪಂದ್ಯದಲ್ಲಿ ಬೆಂಗಳೂರು ತಂಡ ಬೆಳಗಾವಿ ವಿಭಾಗೀಯ ತಂಡವನ್ನು 1-0 ಗೋಲಿನಿಂದ ಸೋಲಿಸಿತು. ಬೆಂಗಳೂರು ತಂಡದಲ್ಲಿ ಇಂದಿರಾನಗರದ ಪೂರ್ಣಪ್ರಜ್ಞ ಎಜುಕೇಶನ್ ಸೆಂಟರ್(ಪಿಪಿಇಸಿ) ಶಾಲೆಯ 7 ವಿದ್ಯಾರ್ಥಿಗಳಿದ್ದು, ರಾಷ್ಟ್ರ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ,
ಅಂಡರ್-17 ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ ವಿಭಾಗೀಯ ತಂಡ ಬೆಂಗಳೂರು ಉತ್ತರ ವಿಭಾಗೀಯ ತಂಡವನ್ನು ಪ್ರತಿನಿಧಿಸಿದ್ದ ವಿದ್ಯಾನಗರ ಸ್ಪೋರ್ಟ್ಸ್ ಕ್ಲಬ್ ವಿರುದ್ಧ 0-1 ಗೋಲಿನಿಂದ ಸೋಲುಂಡು ರನ್ನರ್ಸ್ ಅಪ್ ಸ್ಥಾನ ಪಡೆಯಿತು. ಇದೇ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮೈಸೂರು ವಿಭಾಗೀಯ ತಂಡವನ್ನು ಪ್ರತಿನಿಧಿಸಿದ ಸೇಂಟ್ ಜೋಸೆಫ್ ಪದವಿ ಪೂರ್ವ ಕಾಲೇಜು ತಂಡ ಬೆಳಗಾವಿ ವಿಭಾಗೀಯ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿತು.

 

LEAVE A REPLY

Please enter your comment!
Please enter your name here

13 − nine =