ಭಾರತ ‘ಎ’ ತಂಡದಲ್ಲಿ ಕರ್ನಾಟಕದ ಮಯಾಂಕ್, ಸಮರ್ಥ್, ಗೌತಮ್

0
PC: Facebook
ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ಎ ತಂಡದ ವಿರುದ್ಧದ 4 ದಿನಗಳ ಎರಡು ಪಂದ್ಯಗಳಿಗೆ ಪ್ರಕಟಿಸಲಾಗಿರುವ ಭಾರತ ‘ಎ’ ತಂಡದಲ್ಲಿ ಕರ್ನಾಟಕದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಮಯಾಂಕ್ ಅಗರ್ವಾಲ್, ಆರ್.ಸಮರ್ಥ್ ಮತ್ತು ಆಲ್‌ರೌಂಡರ್ ಕೃಷ್ಣಪ್ಪ ಗೌತಮ್ ಸ್ಥಾನ ಪಡೆದಿದ್ದಾರೆ.
ಮುಂಬೈ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಭಾರತ ‘ಎ’ ತಂಡವನ್ನು ಮುನ್ನಡೆಸಲಿದ್ದು, ಭಾರತದ 19 ವರ್ಷದೊಳಗಿನವರ ವಿಶ್ವಕಪ್ ವಿಜೇತ ತಂಡದ ಆಟಗಾರ, ಪಂಜಾಬ್‌ನ ಶುಭಮನ್ ಗಿಲ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ಚೈನಾಮನ್ ಸ್ಪಿನ್ನರ್ ಕುಲ್‌ದೀಪ್ ಯಾದವ್ ಅವರನ್ನೂ ಕೂಡ ಭಾರತ ‘ಎ’ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾ ‘ಎ’ ವಿರುದ್ಧದ ನಾಲ್ಕು ದಿನಗಳ ಪಂದ್ಯಗಳಿಗೆ ಭಾರತ ‘ಎ’ ತಂಡ
ಶ್ರೇಯಸ್ ಅಯ್ಯರ್ (ನಾಯಕ), ಮಯಾಂಕ್ ಅಗರ್ವಾಲ್, ಆರ್.ಸಮರ್ಥ್, ಅಭಿಮನ್ಯು ಈಶ್ವರನ್, ಅಂಕಿತ್ ಬಾವ್ನೆ, ಶುಭಮನ್ ಗಿಲ್, ಕೆ.ಎಸ್ ಭರತ್ (ವಿಕೆಟ್ ಕೀಪರ್), ಶಹಬಾಜ್ ನದೀಮ್, ಕುಲ್‌ದೀಪ್ ಯಾದವ್, ಕೆ.ಗೌತಮ್, ರಜನೀಶ್ ಗುರ್ಬಾನಿ, ನವ್‌ದೀಪ್ ಸೈನಿ, ಅಂಕಿತ್ ರಜಪೂತ್, ಮೊಹಮ್ಮದ್ ಸಿರಾಜ್.

LEAVE A REPLY

Please enter your comment!
Please enter your name here

1 + 17 =