ಭುವನೇಶ್ವರ್ ಕುಮಾರ್ ಮತ್ತೆ ಫಿಟ್, ಆಲೂರಿನಲ್ಲಿ ಭಾರತ ಎ ಪರ ಆಡಲಿರುವ ಸ್ವಿಂಗ್ ಸುಲ್ತಾನ್

0
PC: BCCI Domestic/Twitter

ಬೆಂಗಳೂರು, ಆಗಸ್ಟ್ 27: ಇಂಗ್ಲೆಂಡ್ ಪ್ರವಾಸದಲ್ಲಿ ಬೆನ್ನು ನೋವಿಗೆ ತುತ್ತಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿರುವ ವೇಗಿ ಭುವನೇಶ್ವರ್ ಕುಮಾರ್ ಮತ್ತೆ ಫಿಟ್ ಆಗಿದ್ದಾರೆ. ಫಿಟ್ ಆಗಿರುವ ಹಿನ್ನೆಲೆಯಲ್ಲಿ ಬುಧವಾರ ಆಲೂರಿನ ಕೆಎಸ್‌ಸಿಎ ಮೈದಾನದಲ್ಲಿ ನಡಯಲಿರುವ ದಕ್ಷಿಣ ಆಫ್ರಿಕಾ ‘ಎ’ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಭಾರತ ‘ಎ’ ತಂಡದ ಪರ ಆಡಲಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಪ್ರಕಟಿಸಲಾಗಿದ್ದ 18 ಸದಸ್ಯರ ತಂಡದಲ್ಲಿ ಭುವಿ ಸ್ಥಾನ ಪಡೆದಿರಲಿಲ್ಲ. ಆದರೆ ಟೀಮ್ ಇಂಡಿಯಾದೊಂದಿಗೆ ಭುವಿ ಇಂಗ್ಲೆಂಡ್‌ನಲ್ಲೇ ಇದ್ದರು. ಆದರೆ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳುವ ಸಲುವಾಗಿ ಲಾರ್ಡ್ಸ್‌ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ನಂತರ ಬೆಂಗಳೂರಿಗೆ ಆಗಮಿಸಿದ್ದರು.
28 ವರ್ಷದ ಭುವನೇಶ್ವರ್ ಕುಮಾರ್ ಜುಲೈ 17ರಂದು ಹೆಡಿಂಗ್ಲೆಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ 3ನೇ ಪಂದ್ಯದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here

twelve + 3 =