ಮಹಿಳಾ ಕ್ರಿಕೆಟ್: ವಿಶ್ವದಾಖಲೆ ನಿರ್ಮಿಸಿದ ಮಿಥಾಲಿ ರಾಜ್..!

0

ಹ್ಯಾಮಿಲ್ಟನ್, ಫೆಬ್ರವರಿ 1: ಭಾರತ ಮಹಿಳಾ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್, ಮಹಿಳಾ ಕ್ರಿಕೆಟ್ ನಲ್ಲಿ 200 ಏಕದಿನ ಪಂದ್ಯಗಳನ್ನಾಡಿದ ವಿಶ್ವದ ಮೊದಲ ಆಟಗಾರ್ತಿ ಎಂಬ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಹ್ಯಾಮಿಲ್ಟನ್ ನಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮಿಥಾಲಿ ಈ ದಾಖಲೆ ಬರೆದರು. ಆದರೆ ತಮ್ಮ 200ನೇ ಪಂದ್ಯದಲ್ಲಿ ಭಾರತಕ್ಕೆ ಜಯ ತಂದುಕೊಡುವಲ್ಲಿ ಮಿಥಾಲಿ ರಾಜ್ ವಿಫಲರಾದರು. ಆದರೂ ಸರಣಿಯನ್ನು ಭಾರತ 2-1ರ ಅಂತರದಲ್ಲಿ ಗೆದ್ದುಕೊಂಡಿತು.

1999ರ ಜೂನ್ 26ರಂದು ಏಕದಿನ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಮಿಥಾಲಿ ರಾಜ್ 19 ವರ್ಷಗಳಿಂದ ಭಾರತ ಪರ ಆಡುತ್ತಿದ್ದಾರೆ.

LEAVE A REPLY

Please enter your comment!
Please enter your name here

fifteen + 16 =