ಮೆಲ್ಬರ್ನ್ ಟೆಸ್ಟ್: ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಸಿಗುತ್ತಾ ಅವಕಾಶ..?

0

ಮೆಲ್ಬರ್ನ್, ಡಿಸೆಂಬರ್ 23: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯ ಡಿಸೆಂಬರ್ 26ರಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವೆಂದೇ ಕರೆಯಲ್ಪಡುವ ಈ ಪಂದ್ಯವನ್ನು ಗೆದ್ದ ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಲು ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಪಣ ತೊಟ್ಟಿದೆ.
ಅಡಿಲೇಡ್ ನಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯವನ್ನು ಭಾರತ ಗೆದ್ರೆ, ಪರ್ತ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಗೆದ್ದಿದ್ದ ಆಸ್ಟ್ರೇಲಿಯಾ 1-1ರಲ್ಲಿ ಸಮಬಲ ಸಾಧಿಸಿತ್ತು. ಇದೀಗ 3ನೇ ಟೆಸ್ಟ್ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗುತ್ತಿವೆ.
ಮೊದಲ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಗಳಾದ ಕೆ.ಎಲ್ ರಾಹುಲ್ ಮತ್ತು ಮುರಳಿ ವಿಜಯ್ ವಿಫಲರಾಗಿದ್ದಾರೆ. ಹೀಗಾಗಿ 3ನೇ ಪಂದ್ಯದಲ್ಲಿ ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್ ಅವಕಾಶ ಪಡೆಯಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ. ಭಾನುವಾರ ಟೀಮ್ ಇಂಡಿಯಾ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ನಡೆಸಿದ್ದು, ಮಯಾಂಕ್ ಅಗರ್ವಾಲ್ ಅಭ್ಯಾಸದ ವೇಳೆ ಗಮನ ಸೆಳೆದಿದ್ದಾರೆ.

 

LEAVE A REPLY

Please enter your comment!
Please enter your name here

5 × 2 =