ರಿಕಿ ಪಾಂಟಿಂಗ್ ಕಾಲರ್ ಪಟ್ಟಿಗೆ ‘ದಾದಾ’ ಕೈ ಹಾಕಿದ್ದೇಕೆ..?

0

ದೆಹಲಿ, ಮಾರ್ಚ್ 30: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಮತ್ತು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ನಾಯಕು. ಸದಾಯ ಇಬ್ಬರೂ ಐಪಿಎಲ್-12ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದಾರೆ.

ರಿಕಿ ಪಾಂಟಿಂಗ್ ರಿಕಿ ಕ್ಯಾಪಿಟಲ್ಸ್ ತಂಡದ ಹೆಡ್ ಕೋಚ್ ಆಗಿದ್ದರೆ, ಗಂಗೂಲಿ ತಂಡಕ್ಕೆ ಸಲಹೆಗಾರರಾಗಿದ್ದಾರೆ.

ಯುವ ಆಟಗಾರರಿಂದ ಕೂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಾಂಟಿಂಗ್-ದಾದಾ ಗರಡಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿದೆ. ಶನಿವಾರ ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಥದ ಪಂದ್ಯ ಟೈ ಆಗಿತ್ತು. ನಂತರ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ ಗೆಲುವು ಸಾಧಿಸಿತ್ತು. ಪಂದ್ಯ ಗೆದ್ದ ನಂತರ ರಿಕಿ ಪಾಂಟಿಂಗ್ ಮತ್ತು ಸೌರವ್ ಗಂಗೂಲಿ ತಂಡದ ಸದಸ್ಯರೊಂದಿಗೆ ಮೈದಾನದಲ್ಲಿ ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಸೌರವ್ ಗಂಗೂಲಿ ರಿಕಿ ಪಾಂಟಿಂಗ್ ಅವರ ಕಾಲರ್ ಹಿಡಿದುಕೊಂಡಿರುವ ಚಿತ್ರ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ವಾಸ್ತವಾಂಶ ಏನೆಂದರೆ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪಾಂಟಿಂಗ್ ಅವರನ್ನು ಅಪ್ಪಿಕೊಳ್ಳುವ ಸಂದರ್ಭದಲ್ಲಿ ತೆಗೆದ ಚಿತ್ರ ಇದು. 

LEAVE A REPLY

Please enter your comment!
Please enter your name here

twenty − sixteen =