ಸಿಡ್ನಿ ಟೆಸ್ಟ್‌ನಲ್ಲಿ ಇತಿಹಾಸ ಬರೆದ ಕನ್ನಡಿಗರು.. ರಾಹುಲ್-ಅಗರ್ವಾಲ್ ಅಪರೂಪದ ದಾಖಲೆ

0

ಸಿಡ್ನಿ, ಜನವರಿ 3: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆರಂಭಗೊಂಡ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗರಾದ ಕೆ.ಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಅಪರೂಪದ ದಾಖಲೆ ಬರೆದಿದ್ದಾರೆ.
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತ ಪರ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕದ ಮೊದಲ ಜೋಡಿ ಎಂಬ ಹಿರಿಮೆಗೆ ರಾಹುಲ್ ಮತ್ತು ಮಯಾಂಕ್ ಪಾತ್ರರಾಗಿದ್ದಾರೆ. ಈ ಹಿಂದೆ ಕರ್ನಾಟಕದ ಯಾವ ಜೋಡಿಯೂ ಟೆಸ್ಟ್ ನಲ್ಲಿ ಇನ್ನಿಂಗ್ಸ್ ಆರಂಭಿಸಿರಲಿಲ್ಲ. ಏಕದಿನ ಕ್ರಿಕೆಟ್ ನಲ್ಲಿ ಈ ಹಿಂದೆ ರಾಹುಲ್ ದ್ರಾವಿಡ್ ಮತ್ತು ರಾಬಿನ್ ಉತ್ತಪ್ಪ ಭಾರತ ಪರ ಇನ್ನಿಂಗ್ಸ್ ಆರಂಭಿಸಿದ್ದರು. 2006ರಲ್ಲಿ ಇಂದೋರ್ ನಲ್ಲಿ ನಡೆದ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಜೊತೆ ರಾಬಿನ್ ಉತ್ತಪ್ಪ ಇನ್ನಿಂಗ್ಸ್ ಆರಂಭಿಸಿದ್ದರು. ಅದು ಉತ್ತಪ್ಪ ಅವರ ಪದಾರ್ಪಣೆಯ ಪಂದ್ಯವಾಗಿತ್ತು. ಆ ಪಂದ್ಯದಲ್ಲಿ ಕೊಡಗಿನ ಕಲಿ ಉತ್ತಪ್ಪ 86 ರನ್ ಗಳಿಸಿದ್ದರು.
ಸಿಡ್ನಿಯಲ್ಲಿ ಇತಿಹಾಸ ನಿರ್ಮಿಸದ ಕನ್ನಡಿಗರ ಪೈಕಿ ಮಯಾಂಕ್ ಅಗರ್ವಾಲ್ ಆಕರ್ಷಕ ಅರ್ಧಶತಕದೊಂದಿಗೆ ಮಿಂಚಿ 112 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಗಳ ನೆರವಿನಿಂದ 77 ರನ್ ಗಳಿಸಿದರೆ, ರಾಹುಲ್ 9 ರನ್ನಿಗೆ ಔಟಾಗಿ ಮತ್ತೆ ವೈಫಲ್ಯ ಎದುರಿಸಿದರು.

LEAVE A REPLY

Please enter your comment!
Please enter your name here

four + ten =