ಟಿ20 ಕ್ರಿಕೆಟ್‌ಗೆ ಮಿಥಾಲಿ ರಾಜ್ ಶೀಘ್ರದಲ್ಲೇ ಗುಡ್ ಬೈ..!

0
Mithali Raj, PC: BCCI

ಬೆಂಗಳೂರು, ಫೆಬ್ರವರಿ 5: ಮಹಿಳಾ ಕ್ರಿಕೆಟ್ ಜಗತ್ತಿನ ದಿಗ್ಗಜ ಆಟಗಾರ್ತಿ, ಭಾರತ ಮಹಿಳಾ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್ ಟಿ20 ಕ್ರಿಕೆಟ್ ಗೆ ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.

ಟಿ20 ಕ್ರಿಕೆಟ್‌ಗೆ ಮಿಥಾಲಿ ರಾಜ್ ಶೀಘ್ರದಲ್ಲೇ ಗುಡ್ ಬೈ..!

ಮಹಿಳಾ ಕ್ರಿಕೆಟ್ ಜಗತ್ತಿನ ದಿಗ್ಗಜ ಆಟಗಾರ್ತಿ, ಭಾರತ ಮಹಿಳಾ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್ ಟಿ20 ಕ್ರಿಕೆಟ್ ಗೆ ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.

ಮಾರ್ಚ್ 4ರಂದು ಅಸ್ಸಾಂನ ಬರ್ಸಪರ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿರುವ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ನಂತರ ಚುಟುಕು ಕ್ರಿಕೆಟ್ ಗೆ ಮಿಥಾಲಿ ನಿವೃತ್ತಿ ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ.

36 ವರ್ಷದ ಮಿಥಾಲಿ ರಾಜ್ ಸದ್ಯ ನ್ಯೂಜಿಲೆಂಡ್ ಪ್ರವಾಸದಲ್ಲಿದ್ದು, ಬುಧವಾರ ಆರಂಭವಾಗಲಿರುವ 3 ಪಂದ್ಯಗಳ ಟಿ20 ಸರಣಿಯಲ್ಲಿ ಆಡುತ್ತಿದ್ದಾರೆ. ಆದರೆ ಟಿ20 ಕ್ರಿಕೆಟ್ ನಲ್ಲಿ ಅವರ ಸ್ಟ್ರೈಕ್ ರೇಟ್ ಕುಸಿದಿರುವುದರಿಂದ ಆಡುವ ಬಳಗದಲ್ಲಿ ಸ್ಥಾನ ಸಿಗುವ ಬಗ್ಗೆ ಯಾವುದೇ ಗ್ಯಾರಂಟಿಯಿಲ್ಲ. ವೆಸ್ಟ್ ಇಂಡೀಸ್ ನಲ್ಲಿ ಇತ್ತೀಚೆಗೆ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲೂ ಮಿಥಾಲಿ ರಾಜ್ ಅವರನ್ನು ಆಡುವ ಬಳಗದಿಂದ ಹೊರಗಿಡಲಾಗಿತ್ತು.

ಇದುವರೆಗೆ 85 ಟಿ20 ಪಂದ್ಯಗಳನ್ನಾಡಿರುವ ಮಿಥಾಲಿ 37.42ರ ಸರಾಸರಿಯಲ್ಲಿ 17 ಅರ್ಧಶತಕಗಳ ಸಹಿತ 2283 ರನ್ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here

four × 2 =