KSCA ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಬಿನ್ನಿ, ಕಾರ್ಯದರ್ಶಿ ಸ್ಥಾನಕ್ಕೆ ಸಂತೋಷ್ ಮೆನನ್ ಸ್ಪರ್ಧೆ

0

ಬೆಂಗಳೂರು, ಸಪ್ಟೆಂಬರ್ 27: ರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಯ ಆಡಳಿತ ಮಂಡಳಿಗೆ ಅಕ್ಟೋಬರ್ 3ರಂದು ಚುನಾವಣೆ ನಡೆಯಲಿದೆ. ಅಂದೇ ವಾರ್ಷಿಕ ಮಹಾಸಭೆ ನಡೆಯಲಿದ್ದು, ನಂತರ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ.

KSCA ಇತಿಹಾಸದಲ್ಲೇ ಇದೇ ಮೊದಲ ಬಾರಿ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಬಳಸಲು ನಿರ್ಧರಿಸಲಾಗಿದೆ. ಅಕ್ಟೋಬರ್ 3ರಂದು ನಡೆಯಲಿರುವ ಚುನಾವಣೆಗೆ ಸಿದ್ಧತೆಗಳು ಆರಂಭವಾಗಿದ್ದು, ಪದಾಧಿಕಾರಿಗಳ ಸ್ಥಾನಕ್ಕೆ ಸ್ಪರ್ಧಿಸಲು ಪೈಪೋಟಿಯೂ ಜೋರಾಗಿದೆ.

ರಾಜ್ಯ ಕ್ರಿಕೆಟ್ ಸಂಸ್ಥೆಯ ಮೂಲಗಳ ಪ್ರಕಾರ ಮಾಜಿ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಬಣದಿಂದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಟೆಸ್ಟ್ ಕ್ರಿಕೆಟಿಗ ರೋಜರ್ ಬಿನ್ನಿ, ಕಾರ್ಯದರ್ಶಿ ಸ್ಥಾನಕ್ಕೆ ಸಂತೋಷ್ ಮೆನನ್, ಉಪಾಧ್ಯಕ್ಷ ಸ್ಥಾನಕ್ಕೆ ಜೆ.ಅಭಿರಾಮ್ ಮತ್ತು ಶಾವೀರ್ ತಾರಾಪುರ್, ಖಜಾಂಚಿ ಸ್ಥಾನಕ್ಕೆ ವಿನಯ್ ಮೃತ್ಯುಂಜಯ, ಲೈಫ್ ಮೆಂಬರ್ ವಿಭಾಗದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತಾ ರಂಗಸ್ವಾಮಿ ಮತ್ತು ಶಾಂತಿ ಸ್ವರೂಪ್, ಸಾಂಸ್ಥಿಕ ಪ್ರತಿನಿಧಿಗಳ ವಿಭಾಗದಲ್ಲಿ ಮಾಜಿ ರಣಜಿ ಕ್ರಿಕೆಟಿಗ ವಿ.ಎಸ್ ತಿಲಕ್ ನಾಯ್ಡು, ಜೈ ಸಿಂಗ್ ಮತ್ತು ಕೋಟ ಕೋದಂಡರಾಮ್ ಸ್ಪರ್ಧಿಸುವ ಸಾಧ್ಯತೆಯಿದೆ. 

LEAVE A REPLY

Please enter your comment!
Please enter your name here

sixteen − one =