71 ವರ್ಷ, 31 ಸರಣಿ, 98 ಟೆಸ್ಟ್, 29 ಕ್ಯಾಪ್ಟನ್ಸ್… ವಿರಾಟ್ ದಿ ಗ್ರೇಟ್..!

0

ಸಿಡ್ನಿ, ಜನವರಿ 7: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡಲಾಗದ ಸಾಧನೆಯನ್ನು ಕಿಂಗ್ ಕೊಹ್ಲಿ ಮಾಡಿದ್ದಾರೆ. ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಭಾರತದ ಮೊದಲ ನಾಯಕನೆಂಬ ದಾಖಲೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಭಾರತ ತಂಡ 71 ವರ್ಷಗಳಿಂದ ಟೆಸ್ಟ್ ಪಂದ್ಯಗಳನ್ನಾಡುತ್ತಿದ್ದರೂ ಇದುವರೆಗೆ ಸರಣಿ ಗೆಲ್ಲುವಲ್ಲಿ ವಿಫಲವಾಗಿತ್ತು. ಕಳೆದ 7 ದಶಕಗಳಿಂದ ಭಾರತ ತಂಡ ಆಸ್ಟ್ರೇಲಿಯಾದಲ್ಲಿ 31 ಟೆಸ್ಟ್ ಸರಣಿಗಳಲ್ಲಿ ಒಟ್ಟು 98 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ಅವಧಿಯಲ್ಲಿ 272 ಆಟಗಾರರು ಭಾರತ ಪರ ಟೆಸ್ಟ್ ಆಡಿದ್ದಾರೆ. 29 ನಾಯಕರು ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಆದರೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆಲುವು ಮಾತ್ರ ಇದುವರೆಗೆ ಮರಿಚಿಕೆಯಾಗಿಯೇ ಉಳಿದಿತ್ತು. ಆದರೆ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಗೆದ್ದು ಇತಿಹಾಸ ನಿರ್ಮಿಸಿದೆ.

LEAVE A REPLY

Please enter your comment!
Please enter your name here

17 − 11 =