ಚೆನ್ನೈ ವಿಮಾನ ನಿಲ್ದಾಣದಲ್ಲಿ ನೆಲದ ಮೇಲೆಯೇ ಕುಳಿತ ಧೋನಿ..!

0
PC: Dhonism/Twiiter

ಚೆನ್ನೈ, ಮಾರ್ಚ್ 24: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸರಳತೆಗೆ ಹೆಸರಾದವರು. ಆಟದ ಜೊತೆಗೆ ತಮ್ಮ ಸರಳ ವ್ಯಕ್ತಿತ್ವದಿಂದ ಅಭಿಮಾನಿಗಳ ಪ್ರೀತಿಗೆ ಪಾತ್ರರಾದವರು ಧೋನಿ.

ಇದೀಗ ಎಂ.ಎಸ್ ಧೋನಿ ಮತ್ತೊಮ್ಮೆ ಸರಳತೆ ಮೆರೆದಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ನೆಲದ ಮೇಲೆಯೇ ಕುಳಿತುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್-12ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್ ಗಳ ಗೆಲುವು ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಮೊದಲ ಪಂದ್ಯವನ್ನು ಗೆದ್ದಿರುವ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭಾನುವಾರ ದೆಹಲಿಗೆ ಪ್ರಯಾಣಿಸಿತು. ದೆಹಲಿ ಪ್ರಯಾಣದ ಸಂದರ್ಭದಲ್ಲಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಧೋನಿ ನೆಲದ ಮೇಲೆಯೇ ಕುಳಿತು ಗಮನ ಸೆಳೆದರು.

ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಮಂಗಳವಾರ ನಡೆಯಲಿರುವ ತನ್ನ 2ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.

LEAVE A REPLY

Please enter your comment!
Please enter your name here

eighteen + eleven =