ಹುತಾತ್ಮ ಸೈನಿಕರ ಕುಟುಂಬಗಳಿಗೆ ಧೋನಿ ಸಹಾಯ… ಕೊಟ್ಟದ್ದೆಷ್ಟು ಕೋಟಿ ಗೊತ್ತಾ..?

0
PC: Twitter

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪುಲ್ವಾಮ ಉಗ್ರದಾಳಿಯಲ್ಲಿ ಹುತಾತ್ಮರಾದ 40 CRPF ಯೋಧರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ್ದಾರೆ. ಈ ಕುರಿತು ಧೋನಿ ಅಫಿಶಿಯಲ್ ಫ್ಯಾನ್ ಪೇಜ್ ಟ್ವೀಟ್ ಮಾಡಿದೆ.

ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ನಲ್ ಕೂಡ ಆಗಿರುವ ಧೋನಿ, ಹುತಾತ್ಮ ಕುಟುಂಬಗಳ ಕಲ್ಯಾಣ ನಿಧಿಗೆ 7 ಕೋಟಿ ರೂ.ಗಳನ್ನು ನೀಡಿದ್ದಾರೆ. ಫೆಬ್ರವರಿ 14ರಂದು ಕಾಶ್ಮೀರದ ಪುಲ್ವಾಮ ಬಳಿ ನಡೆದಿದ್ದ ಉಗ್ರನೊಬ್ಬನ ಆತ್ಮಹತ್ಯಾ ದಾಳಿಗೆ CRPFನ 40 ಯೋಧರು ಬಲಿಯಾಗಿದ್ದರು.

ಪುಲ್ವಾಮ ದಾಳಿಯ ಹಿನ್ನೆಲೆಯಲ್ಲಿ ಜೂನ್ 16ರಂದು ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಲ್ಲಿ ನಡೆಯಬೇಕಿರುವ ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯವನ್ನು ಭಾರತ ಬಹಿಷ್ಕರಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ. ಭಾರತ ತಂಡದ ಮಾಜಿ ನಾಯಕರಾದ ಮೊಹಮ್ಮದ್ ಅಜರುದ್ದೀನ್, ಸೌರವ್ ಗಂಗೂಲಿ ಮತ್ತು ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಪಾಕ್ ವಿರುದ್ಧದ ಪಂದ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

16 − 9 =