ಭದ್ರತೆಗೆ ನಿಯೋಜಿಸಿದ್ದ ಸೈನಿಕರೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ ಲೆಫ್ಟಿನೆಂಟ್ ಕರ್ನಲ್ ಧೋನಿ..!

0
PC: MS Dhoni.Net/Twitter

ದೆಹಲಿ, ಮಾರ್ಚ್ 27: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಸೈನಿಕರೊಂದಿಗೆ ತಾವೇ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಹೊಂದಿರುವ ಧೋನಿ, ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ತಮ್ಮ ಭದ್ರತೆಗೆ ನಿಯೋಜಿಸಿದ್ದ ಸೈನಿಕರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಸೋಮವಾರ ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಧೋನಿ ನಾಯಕತ್ವದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿತ್ತು. ಅದಕ್ಕೂ ಮೊದಲು ಚೆನ್ನೈನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿತ್ತು. ಮಾರ್ಚ್ 31ರಂದು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಲಿರುವ ತನ್ನ 3ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮಾಜಿ ಚಾಂಪಿಯನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

LEAVE A REPLY

Please enter your comment!
Please enter your name here

nine + 18 =