ವಿಶ್ವಕಪ್ 2019: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಇಂಗ್ಲೆಂಡ್ ಎದುರಾಳಿ?

0

ಲಂಡನ್, ಜುಲೈ 4: ಐಸಿಸಿ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡವಾಗಿರುವ ಟೀಮ್ ಇಂಡಿಯಾಗೆ ಸೆಮಿಫೈನಲ್’ನಲ್ಲಿ ಬಲಿಷ್ಠ ಇಂಗ್ಲೆಂಡ್ ಎದುರಾಳಿಯಾಗುವ ಸಾಧ್ಯತೆಯಿದೆ.
ಭಾರತ ತಂಡ ಆಡಿರುವ 8 ಪಂದ್ಯಗಳಲ್ಲಿ 6 ಗೆಲುವು, 1 ಸೋಲು ಮತ್ತು 1 ಫಲಿತಾಂಶವಿಲ್ಲದ ಪಂದ್ಯ ಸಹಿತ 13 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ತಂಡ 9 ಪಂದ್ಯಗಳಲ್ಲಿ 6 ಗೆಲುವು ಮತ್ತು 3 ಸೋಲುಗಳೊಂದಿಗೆ 12 ಅಂಕ ಗಳಿಸಿದ್ದು 3ನೇ ಸ್ಥಾನದಲ್ಲಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಹಾಗೂ 4ನೇ ಸ್ಥಾನ ಗಳಿಸಿದ ತಂಡಗಳ ಮಧ್ಯೆ ಮೊದಲ ಸೆಮಿಫೈನಲ್ ನಡೆಯಲಿದ್ದರೆ, 2 ಮತ್ತು 3ನೇ ಸ್ಥಾನಿಗಳ ಮಧ್ಯೆ 2ನೇ ಸೆಮಿಫೈನಲ್ ನಡೆಯಲಿದೆ. ಸದ್ಯ 11 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡ 4ನೇ ತಂಡವಾಗಿ ಸೆಮಿಫೈನಲ್ ಪ್ರವೇಶಿಸುವುದು ಖಚಿತವಾಗಿದೆ.
ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ತಂಡ 8 ಪಂದ್ಯಗಳಿಂದ 14 ಅಂಕ ಗಳಿಸಿ ಅಗ್ರಸ್ಥಾನದಲ್ಲಿದ್ದರು, ಈಗಿನ ಲೆಕ್ಕಾಚಾರದ ಪ್ರಕಾರ ಸೆಮಿಫೈನಲ್’ನಲ್ಲಿ ಆಸ್ಟ್ರೇಲಿಯಾ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.
ಒಂದು ವೇಳೆ ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ಸೋತು, ಭಾರತ ತಂಡ ಶ್ರೀಲಂಕಾ ವಿರುದ್ಧ ಗೆದ್ದರೆ ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೇರಿ ಆಸ್ಟ್ರೇಲಿಯಾ 2ನೇ ಸ್ಥಾನಕ್ಕೆ ಕುಸಿಯಲಿದೆ. ಆಗ ಸೆಮಿಫೈನಲ್’ನಲ್ಲಿ ಭಾರತಕ್ಕೆ ನ್ಯೂಜಿಲೆಂಡ್ ಎದುರಾಳಿಯಾದ್ರೆ, ಆಸ್ಟ್ರೇಲಿಯಾಗೆ ಇಂಗ್ಲೆಂಡ್ ಎದುರಾಳಿಯಾಗಲಿದೆ.

ಐಸಿಸಿ ವಿಶ್ವಕಪ್ 2019: ಅಂಕಪಟ್ಟಿ

 

LEAVE A REPLY

Please enter your comment!
Please enter your name here

4 × 1 =