ಐಸಿಸಿ ವಿಶ್ವಕಪ್: ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಶತಕ ಬಾರಿಸಿದ ರಾಹುಲ್

1

ಕಾರ್ಡಿಫ್, ಮೇ 28: ಐಸಿಸಿ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಬಾಂಗ್ಲಾದೇಶ ವಿರುದ್ಧ ಆಕರ್ಷಕ ಶತಕ ಸಿಡಿಸಿದ್ದಾರೆ. ಕಾರ್ಡಿಫ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್ ಗಿಳಿದ ರಾಹುಲ್ ಜವಾಬ್ದಾರಿಯುತ ಆಟ ಪ್ರದರ್ಶಿಸಿ ಶತಕ ಬಾರಿಸಿದರು.

ಈ ಮೂಲಕ ತಂಡದ ಪಾಲಿಗೆ ಅತಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿರುವ 4ನೇ ಕ್ರಮಾಂಕಕ್ಕೆ ರಾಹುಲ್ ಉತ್ತರವಾಗಿದ್ದಾರೆ. ಬಾಂಗ್ಲಾ ವಿರುದ್ಧದ ಶತಕದೊಂದಿಗೆ ವಿಶ್ವಕಪ್ ನಲ್ಲಿ ರಾಹುಲ್ 4ನೇ ಕ್ರಮಾಂಕದಲ್ಲಿ ಆಡುವುದು ಖಚಿತವಾಗಿವೆ.

ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಿದ ರಾಹುಲ್ 94 ಎಸೆತಗಳಲ್ಲಿ ಶತಕ ಪೂರ್ತಿಗೊಳಿಸಿದರು. ಅಂತಿಮವಾಗಿ 99 ಎಸೆತಗಳನ್ನೆದುರಿಸಿ ಬಲಗೈ ಬ್ಯಾಟ್ಸ್ ಮನ್ ರಾಹುಲ್ 12 ಬೌಂಡರಿಗಳು ಮತ್ತು 4 ಸಿಕ್ಸರ್ಸ್ ನೆರವಿನಿಂದ 108 ರನ್ ಸಿಡಿಸಿ ಔಟಾದರು. ಈ ಇನ್ನಿಂಗ್ಸ್ ಸಂದರ್ಭದಲ್ಲಿ ಜವಾಬ್ದಾರಿ ಪ್ರದರ್ಶಿಸಿದ ರಾಹುಲ್ 5ನೇ ವಿಕೆಟ್ ಗೆ ಮಾಜಿ ನಾಯಕ ಎಂ.ಎಸ್ ಧೋನಿ ಅವರೊಂದಿಗೆ 153 ರನ್ ಗಳ ಅಮೋಘ ಜೊತೆಯಾಟವಾಡಿದರು.

ಐಸಿಸಿ ವಿಶ್ವಕಪ್ ಟೂರ್ನಿ ಮೇ 30ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಜೂನ್ 5ರಂದು ಸೌಥಾಂಪ್ಟನ್ ನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಲೀಗ್ ಹಂತದಲ್ಲಿ ಪ್ರತಿ ತಂಡಗಳು ತಲಾ 9 ಪಂದ್ಯಗಳನ್ನಾಡಲಿರುವುದು ಈ ಬಾರಿಯ ವಿಶ್ವಕಪ್ ನ ವಿಶೇಷತೆಯಾಗಿದೆ.

1 COMMENT

LEAVE A REPLY

Please enter your comment!
Please enter your name here

10 + 7 =