ಕನ್ನಡಿಗ ಮಯಾಂಕ್ ಅಗರ್ವಾಲ್ ‘ಕ್ರಿಕೆಟ್ ಹೀರೋಸ್ ಎಮರ್ಜಿಂಗ್ ಪ್ಲೇಯರ್’

0


ಮುಂಬೈ, ಮೇ 30: ಕರ್ನಾಟಕದ ಭರವಸೆಯ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ‘ಇಂಡಿಯನ್ ಕ್ರಿಕೆಟ್ ಹೀರೋಸ್ ಎಮರ್ಜಿಂಗ್ ಪ್ಲೇಯರ್ ಆಫ್ ದಿ ಇಯರ್’ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಮುಂಬೈನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಯಾಂಕ್ ಅಗರ್ವಾಲ್ ಅವರ ಅನುಪಸ್ಥಿತಿಯಲ್ಲಿ ಅವರ ಆತ್ಮೀಯ ಸ್ನೇಹಿತ ಕೆ.ಎಲ್ ರಾಹುಲ್ ಪ್ರಶಸ್ತಿ ಸ್ವೀಕರಿಸಿದರು. RPSG ಗ್ರೂಪ್ ಪ್ರಾಯೋಜಕತ್ವದಲ್ಲಿ ಪ್ರತಿ ವರ್ಷ ಭಾರತೀಯ ಕ್ರಿಕೆಟ್ ಹೀರೊಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.

28 ವರ್ಷದ ಬಲಗೈ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಕಳೆದ ವರ್ಷ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ 76 ರನ್ ಗಳಿಸಿ ಮಿಂಚಿದ್ದ ಮಯಾಂಕ್ ದೇಶೀಯ ಕ್ರಿಕೆಟ್ ನಲ್ಲಿ ರನ್ ಹೊಳೆಯನ್ನೇ ಹರಿಸಿದ್ದಾರೆ. 2017-18ನೇ ಸಾಲಿನ ದೇಶೀಯ ಕ್ರಿಕೆಟ್ ಋತುವಿನಲ್ಲಿ ಮಯಾಂಕ್ 2 ಸಾವಿರಕ್ಕೂ ಹೆಚ್ಚು ರನ್ ಕಲೆ ಹಾಕಿದ್ದರು.

ಮಯಾಂಕ್ ಅಗರ್ವಾಲ್ ಅವರಿಗೆ ಪ್ರಶಸ್ತಿ ಲಭಿಸಿರುವ ಸಂಭ್ರಮವನ್ನು ಅವರ ಕೋಚ್ ಆರ್.ಎಕ್ಸ್ ಮುರಳೀಧರ್ ಇನ್ಸ್ ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

three × one =