ಸೈಯದ್ ಮುಷ್ತಾಕ್ ಅಲಿ ಟಿ20: ಕರ್ನಾಟಕ ಚಾಂಪಿಯನ್ಸ್… ಇತಿಹಾಸ ಬರೆದ ಕನ್ನಡಿಗರು

0

ಇಂದೋರ್, ಮಾರ್ಚ್ 14: ಮನೀಶ್ ಪಾಂಡೆ ನಾಯಕತ್ವದ ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.

ಟೂರ್ನಿಯಲ್ಲಿ ಸೋಲನ್ನೇ ಕಾಣದ ಕರ್ನಾಟಕದ ತಂಡ ಸತತ 12ನೇ ಗೆಲುವಿನೊಂದಿಗೆ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಮಹಾರಾಷ್ಟ್ರ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಮಹಾರಾಷ್ಟ್ರ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 155 ರನ್ ಗಳ ಉತ್ತಮ ಮೊತ್ತ ಕಲೆ ಹಾಕಿತು.

ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 18.3 ಓವರ್ ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿ ಚಾಂಪಿಯನ್ ಪಟ್ಟಕ್ಕೇರಿತು. ಕರ್ನಾಟಕ ಪರ ಆರಂಭಿಕ ಬ್ಯಾಟ್ಸ್ ಮನ್ ರೋಹನ್ ಕದಂ 39 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ಸ್ ನೆರವಿನಿಂದ 60 ರನ್ ಗಳಿಸಿದ್ದಷ್ಟೇ ಅಲ್ಲದೆ, ಟೂರ್ನಿಯಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಬ್ಯಾಟ್ಸ್ ಮನ್ ಎಂಬ ಹಿರಿಮೆಗೆ ಪಾತ್ರರಾದರು.

3ನೇ ಕ್ರಮಾಂಕದಲ್ಲಿ ಕ್ರೀಸ್ ಗಿಳಿದ ರನ್ ಮಷಿನ್ ಅಗರ್ವಾಲ್ 57 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ಸ್ ನೆರವಿನಿಂದ ಅಜೇಯ 85 ರನ್ ಗಳಿಸಿ ಗೆಲುವಿನ ರೂವಾರಿಯಾದರು. ಅಷ್ಟೇ ಅಲ್ಲದೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡರು.

Brief scores

Maharashtra: 155/4 in 20 overs (Naushad Shaikh 69 not out, Rahul Tripati 30; A Mithun 2/24, KC Cariyappa 1/26, J Suchit 1/20) lost to Karnataka: 159/2 in 18.3 overs (Rohan Kadam 60, Mayank Agarwal 85 not out; Samad Fallah 1/33) by 8 wickets.

LEAVE A REPLY

Please enter your comment!
Please enter your name here

14 − four =