ಬೆಂಗಳೂರು ಬ್ಯಾಟಲ್: ಆಡಿ ಬೆಳೆದ ಮೈದಾನದಲ್ಲಿ ಅಬ್ಬರಿಸಲು ರಾಹುಲ್ ಭರ್ಜರಿ ತಾಲೀಮು.. ಇಲ್ಲಿದೆ ವೀಡಿಯೊ..!

0
PC: BCCI/Twitter

ಭಾರತ ಹಾಗೂ ಪ್ರವಾಸಿ ಆಸ್ಟ್ರೇಲಿಯಾ ನಡುವಿನ 2 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯ ನಾಳೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು 3 ವಿಕೆಟ್ ಗಳಿಂದ ಗೆದ್ದಿರುವ ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ ಸರಣಿಯನ್ನು ಸಮಬಲಗೊಳಿಸಿ ಸರಣಿ ಸೋಲಿನ ಅವಮಾನದಿಂದ ಪಾರಾಗಬೇಕಾದರೆ ಭಾರತ ಬೆಂಗಳೂರು ಬ್ಯಾಟಲ್ ಅನ್ನು ಗೆಲ್ಲಲೇಬೇಕಿದೆ.

ಬೆಂಗಳೂರು ಬ್ಯಾಟಲ್ ಗೆ ಲೋಕಲ್ ಬಾಯ್ ಕೆ.ಎಲ್ ರಾಹುಲ್ ಸಜ್ಜಾಗಿದ್ದು, ಮಂಗಳವಾರ ಭರ್ಜರಿ ತಾಲೀಮು ನಡೆಸಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಟೀಮ್ ಇಂಡಿಯಾ ಅಭ್ಯಾಸದ ವೇಳೆ ರಾಹುಲ್ ಆಕರ್ಷಣೆಯ ಕೇಂದ್ರಬಿಂದುವಾಗಿದ್ದರು. ಕಾಫಿ ವಿಥ್ ಕರಣ್ ಕಾರ್ಯಕ್ರಮದ ವಿವಾದದ ನಂತರ ಅಮಾನತು ಶಿಕ್ಷೆಗೆ ಗುರಿಯಾಗಿದ್ದ ರಾಹುಲ್ ಭಾರತ ತಂಡದಿಂದ ಹೊರ ಬಿದ್ದಿದ್ದರು.

ಆದರೆ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿರುವ ರಾಹುಲ್ ಪುನರಾಗಮನದ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ 50 ರನ್ ಸಿಡಿಸಿ ಮಿಂಚಿದ್ದರು. ಈ ಇನ್ನಿಂಗ್ಸ್ ನಲ್ಲಿ 6 ಬೌಂಡರಿಗಳು ಹಾಗೂ ಒಂದು ಸಿಕ್ಸರ್ ಒಳಗೊಂಡಿದ್ದವು.

ತಾವು ಆಡಿ ಬೆಳೆದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಪಂದ್ಯದಲ್ಲೂ ರಾಹುಲ್ ಮಿಂಚುವ ವಿಶ್ವಾಸ ಹೊಂದಿದ್ದಾರೆ.

LEAVE A REPLY

Please enter your comment!
Please enter your name here

eight + fifteen =