ರಣಜಿ ಟ್ರೋಫಿ ಸೆಮಿಫೈನಲ್: ಬಂಗಾಳ ವಿರುದ್ಧ ಕರ್ನಾಟಕಕ್ಕೆ ರಾಹುಲ್ ಆನೆಬಲ

0
PC: Twitter

ಜಮ್ಮು, ಫೆಬ್ರವರಿ 24: ಫೆಬ್ರವರಿ 29ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆರಂಭವಾಗಲಿರುವ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಆತಿಥೇಯ ಬಂಗಾಳ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಕರ್ನಾಟಕ ಪರ ಸ್ಟಾರ್ ಓಪನರ್ ಕೆ.ಎಲ್ ರಾಹುಲ್ ಕಣಕ್ಕಿಳಿಯಲಿರುವುದು ರಾಜ್ಯ ತಂಡಕ್ಕೆ ಆನೆಬಲ ಬಂದಂತಾಗಿದೆ.

ನ್ಯೂಜಿಲೆಂಡ್ ಪ್ರವಾಸದಿಂದ ವಾಪಸ್ಸಾಗಿರುವ ರಾಹುಲ್ ವಿಶ್ರಾಂತಿಗೆ ಮೊರೆ ಹೋಗಿದ್ದ ಕಾರಣ ಜಮ್ಮು-ಕಾಶ್ಮೀರ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯದಿಂದ ಹೊರಗುಳಿದಿದ್ದರು. ಜಮ್ಮುವಿನಲ್ಲಿ ಸೋಮವಾರ ಅಂತ್ಯಗೊಂಡ ಕ್ವಾರ್ಟರ್ ಫೈನಲ್ ಪಂದ್ಯವನ್ನು ಕರ್ನಾಟಕ 167 ರನ್’ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಅಮೋಘ ಬೌಲಿಂಗ್ ದಾಳಿ ಸಂಘಟಿಸಿದ ಆಫ್’ಸ್ಪಿನ್ನರ್ ಕೆ.ಗೌತಮ್ 54 ರನ್ನಿತ್ತು 7 ವಿಕೆಟ್ ಕಬಳಿಸಿ ಕರ್ನಾಟಕಕ್ಕೆ ಭರ್ಜರಿ ಜಯ ತಂದುಕೊಟ್ಟರು.

8 ಬಾರಿಯ ಚಾಂಪಿಯನ್ ಕರ್ನಾಟಕ ಈ ಬಾರಿ ರಣಜಿ ಟ್ರೋಫಿ ಗೆಲ್ಲುವ ಫೇವರಿಟ್ ತಂಡವಾಗಿದ್ದು, ಕೆ.ಎಲ್ ರಾಹುಲ್ ಆಗಮನದೊಂದಿಗೆ ಬಂಗಾಳ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ.

ಬಂಗಾಳ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೆ ಕರ್ನಾಟಕ ತಂಡ: ಕರುಣ್ ನಾಯರ್(ನಾಯಕ), ಕೆ.ಎಲ್ ರಾಹುಲ್, ಆರ್.ಸಮರ್ಥ್, ದೇವದತ್ ಪಡಿಕ್ಕಲ್, ಮನೀಶ್ ಪಾಂಡೆ, ಕೆ.ವಿ ಸಿದ್ಧಾರ್ಥ್, ಶರತ್ ಶ್ರೀನಿವಾಸ್(ವಿಕೆಟ್ ಕೀಪರ್), ಶ್ರೇಯಸ್ ಗೋಪಾಲ್, ಕೆ.ಗೌತಮ್, ಜೆ.ಸುಚಿತ್, ಅಭಿಮನ್ಯು ಮಿಥುನ್, ಪ್ರತೀಕ್ ಜೈನ್, ರೋನಿತ್ ಮೋರೆ, ಎಂ.ಪ್ರಸಿದ್ಧ್ ಕೃಷ್ಣ, ಶರತ್ ಬಿ.ಆರ್(ವಿಕೆಟ್ ಕೀಪರ್).

Team: Karun Nair (Captain), Samarth R, Devdutt Padikkal, Manish Pandey, Rahul KL, Sharath Srinivas (WK), Shreyas Gopal, Gowtham K, Mithun A, Siddharth KV, Prasidh M Krishna, Suchith J, Prateek Jain, Ronit More, Sharath BR (WK).

LEAVE A REPLY

Please enter your comment!
Please enter your name here

twelve − six =