ಕೆಪಿಎಲ್ ಫಿಕ್ಸಿಂಗ್ & ಬೆಟ್ಟಿಂಗ್: ಬೆಳಗಾವಿ ಪ್ಯಾಂಥರ್ಸ್ ಬ್ಯಾನ್

0

ಬೆಂಗಳೂರು, ಅಕ್ಟೋಬರ್ 3: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಟೂರ್ನಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡವನ್ನು ಕೆಪಿಎಲ್ನಿಂದ ಅಮಾನತು ಮಾಡಲಾಗಿದೆ.

ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಅಲಿ ಅಷ್ಫಕ್ ಥಾರಾನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡವನ್ನು ಅಮಾನತು ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ. ಗುರುವಾರ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಶುಕ್ರವಾರ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ವಿನಯ್ ಮೃತ್ಯುಂಜಯ ಹೇಳಿದ್ದಾರೆ. ಬೆಳಗಾವಿ ಪ್ಯಾಂಥರ್ಸ್ ತಂಡ 2017ರ ಕೆಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆಗಿತ್ತು.

ಕೆಪಿಎಲ್ ಫಿಕ್ಸಿಂಗ್ & ಬೆಟ್ಟಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಬುಧವಾರವಷ್ಟೇ ದೆಹಲಿ ಮೂಲಕ ಬುಕ್ಕಿ ಭವೇಶ್ ಬಾಫ್ನಾ ಎಂಬಾತನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಬುಕ್ಕಿ ಸಾನ್ಯಮ್ ಎಂಬಾತನ ಬಂಧನಕ್ಕೆ ಬಲೆ ಬೀಸಲಾಗಿದೆ.

LEAVE A REPLY

Please enter your comment!
Please enter your name here

18 − twelve =