ಮಹಿಳಾ ಟಿ20 ಲೀಗ್: ಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ ಕರ್ನಾಟಕದ ವನಿತೆಯರು

0

ಮುಂಬೈ, ಮಾರ್ಚ್ 11: ಬಿಸಿಸಿಐ ಸೀನಿಯರ್ ಮಹಿಳಾ ಟಿ20 ಲೀಗ್ ಟೂರ್ನಿಯಲ್ಲಿ ಕರ್ನಾಟಕ ತಂಡ 15 ವರ್ಷಗಳ ನಂತರ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.

ಮುಂಬೈನಲ್ಲಿ ನಡೆದ ಸೂಪರ್ ಲೀಗ್ ಹಂತದಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರನ್ನು ಗೆದ್ದು ಒಂದು ಪಂದ್ಯದಲ್ಲಿ ಸೋಲು ಕಂಡ ಕರ್ನಾಟಕ 12 ಅಂಕಗಳೊಂದಿಗೆ ‘ಬಿ’ಗುಂಪಿನ ಅಗ್ರಸ್ಥಾನಿಯಾಗಿ ಫೈನಲ್ ಪ್ರವೇಶಿಸಿತು. ಸೂಪರ್ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಕರ್ನಾಟಕ ತಂಡ ಅಸ್ಸಾಂ ವಿರುದ್ಧ 7 ವಿಕೆಟ್ ಗಳ ಸೋಲು ಕಂಡರೂ ಗುಂಪಿನಲ್ಲಿ ಅಗ್ರಸ್ಥಾನ ಉಳಿಸಿಕೊಂಡ ಕರ್ನಾಟಕ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಯಿತು. ತನ್ನ ಈ ಹಿಂದಿನ ಪಂದ್ಯಗಳಲ್ಲಿ ಕರ್ನಾಟಕ ತಂಡ ಹಿಮಾಚಲ ಪ್ರದೇಶ, ಜಾರ್ಖಂಡ್ ಮತ್ತು ಒಡಿಶಾ ವಿರುದ್ಧ ಹ್ಯಾಟ್ರಿಕ್ ಗೆಲುವು ದಾಖಲಿಸಿತ್ತು.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಪಂಜಾಬ್ ತಂಡವನ್ನು ಎದುರಿಸಲಿದೆ. ಪಂಜಾಬ್ ತಂಡ ‘ಎ’ ಗುಂಪಿನಲ್ಲಿ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಿದೆ.

LEAVE A REPLY

Please enter your comment!
Please enter your name here

16 − 7 =