ವಿಶ್ವಕಪ್ ನಂತರ ಧೋನಿ ನಿವೃತ್ತಿಯ ಸಿಗ್ನಲ್ ಕೊಟ್ಟ ಗವಾಸ್ಕರ್..!

0
PC: BCCI

ಹೈದರಾಬಾದ್, ಮಾರ್ಚ್ 2: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಜೂನ್ ತಿಂಗಳಲ್ಲಿ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿಯ ನಂತರ ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗುವ ಸಾಧ್ಯತೆಯಿದೆ.

ಮುಂಬೈನ ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ಈ ಕುರಿತ ಸುಳಿವು ನೀಡಿದ್ದಾರೆ. ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 37 ವರ್ಷದ ಧೋನಿ ಅಜೇಯ 59 ರನ್ ಗಳಿಸಿ ಭಾರತದ ಗೆಲುವಿಗೆ ಕಾರಣರಾಗಿದ್ದರು. 5ನೇ ಕ್ರಮಾಂಕದಲ್ಲಿ ಧೋನಿ ಬ್ಯಾಟಿಂಗ್ ಗೆ ಆಗಮಿಸುವ ವೇಳೆ ಕ್ರೀಡಾಂಗಣದಲ್ಲಿ ನೆರೆದಿದ್ದ 35 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಎದ್ದು ನಿಂತು ಸ್ವಾಗತಿಸಿದ್ದರು.

ಪಂದ್ಯದ ನಂತರ ಈ ಬಗ್ಗೆ ಮಾತನಾಡಿದ ಕಾಮೆಂಟೇಟರ್ ಗವಾಸ್ಕರ್ ”ಇದು ಹೈದರಾಬಾದ್ ನಲ್ಲಿ ಧೋನಿ ಅವರಿಗೆ ಕೊನೆಯ ಅಂತರಾಷ್ಟ್ರೀಯ ಪಂದ್ಯ. ಹೀಗಾಗಿ ಅವರಿಗೆ ಪ್ರೇಕ್ಷಕರು ಆ ರೀತಿಯ ಗೌರವ ಸಲ್ಲಿಸಿದರು” ಎಂದಿದ್ದಾರೆ. ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ಫಿನಿಷರ್ ಆಗಿರುವ ಧೋನಿ ಭಾರತಕ್ಕೆ 2007ರಲ್ಲಿ ಐಸಿಸಿ ಟಿ20 ವಿಶ್ವಕಪ್ ಹಾಗೂ 2011ರಲ್ಲಿ ಐಸಿಸಿ ವಿಶ್ವಕಪ್ ಗೆದ್ದುಕೊಟ್ಟಿದ್ದರು. ಅಲ್ಲದೆ ಭಾರತ ತಂಡ 2013ರಲ್ಲಿ ಧೋನಿ ನಾಯಕತ್ವದಲ್ಲೇ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನೂ ಗೆದ್ದಿತ್ತು.

ಮುಂಬರುವ ಐಸಿಸಿ ವಿಶ್ವಕಪ್ ನಂತರ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸುವ ಎಲ್ಲಾ ಸಾಧ್ಯತೆಗಳಿವೆ.

LEAVE A REPLY

Please enter your comment!
Please enter your name here

seven + 1 =