15 ಸಿಕ್ಸರ್ಸ್… 55 ಎಸೆತ… 147 ರನ್..! ಮೈ ನೇಮ್ ಈಸ್ ಶ್ರೇಯಸ್ ಅಯ್ಯರ್

0

ಮುಂಬೈ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಕೇವಲ 55 ಎಸೆತಗಳಲ್ಲಿ ಸಿಡಿಲಬ್ಬರದ 147 ರನ್ ಸಿಡಿಸಿದ್ದಾರೆ. ಶ್ರೇಯಸ್ ಅಯ್ಯರ್ ಅವರ ಇನ್ನಿಂಗ್ಸ್ ನಲ್ಲಿ 15 ಅಮೋಘ ಸಿಕ್ಸರ್ ಗಳಿದ್ದವು.

ಈ ಮೂಲಕ ಭಾರತೀಯ ಟಿ20 ಇತಿಹಾಸದಲ್ಲೇ ಒಂದೇ ಇನ್ನಿಂಗ್ಸ್ ನಲ್ಲಿ ಅತಿ ಹೆಚ್ಚು ಸಿಕ್ಸರ್ಸ್ ಹಾಗೂ ಅತಿ ಹೆಚ್ಚು ರನ್ ಸಿಡಿಸಿದ ದಾಖಲೆಗೆ ಶ್ರೇಯಸ್ ಅಯ್ಯರ್ ಪಾತ್ರರಾಗಿದ್ದಾರೆ. ಇಂದೋರ್ ನಲ್ಲಿ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಕೇವಲ 38 ಎಸೆತಗಳಲ್ಲಿ ಶತಕ ಪೂರ್ತಿಗೊಳಿಸಿದರು. ಶ್ರೇಯಸ್ ಅಯ್ಯರ್ ಅವರ ಇನ್ನಿಂಗ್ಸ್ ನಲ್ಲಿ 7 ಬೌಂಡರಿಗಳೂ ಇದ್ದವು. ವಿಶೇಷವೆಂದರೆ ಶ್ರೇಯಸ್ ಬಾರಿಸಿದ 147 ರನ್ ಗಳಲ್ಲಿ 118 ರನ್ ಗಳು ಬೌಂಡರಿ ಹಾಗೂ ಸಿಕ್ಸರ್ಸ್ ಮೂಲಕವೇ ದಾಖಲಾದವು.

ಶ್ರೇಯಸ್ ಅಯ್ಯರ್ ಅವರ ಸ್ಫೋಟಕ ಶತಕದಿಂದಾಗಿ ಮುಂಬೈ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 258 ರನ್ ಗಳ ಬೃಹತ್ ಮೊತ್ತ ದಾಖಲಿಸಿತು.

LEAVE A REPLY

Please enter your comment!
Please enter your name here

five × two =