ರಣಜಿ, ವಿಜಯ್ ಹಜಾರೆ, ಮುಷ್ತಾಕ್ ಅಲಿ ಟಿ20: ಟ್ರಿಪಲ್ ಹ್ಯಾಟ್ರಿಕ್ ಹೀರೋ ಅಭಿಮನ್ಯು ಮಿಥುನ್

0

ಬೆಂಗಳೂರು, ನವೆಂಬರ್ 29: ಕರ್ನಾಟಕದ ಅನುಭವಿ ವೇಗದ ಬೌಲರ್, ಪೀಣ್ಯ ಎಕ್ಸ್’ಪ್ರೆಸ್ ಖ್ಯಾತಿಯ ಅಭಿಮನ್ಯು ಮಿಥುನ್ ದೇಶೀಯ ಕ್ರಿಕೆಟ್’ನಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ. ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ ಹಾಗೂ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ಸ್ ಕಬಳಿಸಿದ ಮೊದಲ ಬೌಲರ್ ಎಂಬ ಗೌರವಕ್ಕೆ ಮಿಥುನ್ ಪಾತ್ರರಾಗಿದ್ದಾರೆ.

ಸೂರತ್’ನಲ್ಲಿ ನಡೆದ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಹರ್ಯಾಣ ವಿರುದ್ಧ ಮಿಥುನ್ ಕೊನೇ ಓವರ್’ನಲ್ಲಿ ಹ್ಯಾಟ್ರಿಕ್ ಸಹಿತ 5 ವಿಕೆಟ್ ಉರುಳಿಸಿದರು. ಇತ್ತೀಚೆಗೆ ಬೆಂಗಳೂರಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತಮಿಳುನಾಡು ವಿರುದ್ಧದ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲೂ ಮಿಥುನ್ ಹ್ಯಾಟ್ರಿಕ್ ಸಹಿತ 5 ವಿಕೆಟ್ ಉರುಳಿಸಿದ್ದರು. 2009ರಲ್ಲಿ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ್ದ ಮಿಥುನ್ ಉತ್ತರ ಪ್ರದೇಶದ ಮೀರತ್’ನಲ್ಲಿ ನಡೆದ ತಮ್ಮ ಚೊಚ್ಚಲ ಪಂದ್ಯದಲ್ಲಿ ಉತ್ತರ ಪ್ರದೇಶ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದರು.

LEAVE A REPLY

Please enter your comment!
Please enter your name here

3 × four =