ವಿಜಯ್ ಹಜಾರೆ: ಕರ್ನಾಟಕಕ್ಕೆ ಗುಡ್ ನ್ಯೂಸ್… ಸೆಮಿಫೈನಲ್‌ನಲ್ಲಿ ಆಡಲಿದ್ದಾರೆ ಟೆಸ್ಟ್ ಹೀರೊ ಮಯಾಂಕ್

0

ಬೆಂಗಳೂರು, ಅಕ್ಟೋಬರ್ 22: ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ಪಂದ್ಯಕ್ಕೆ ಸಜ್ಜಾಗುತ್ತಿರುವ ಕರ್ನಾಟಕ ತಂಡಕ್ಕೆ ಆನೆ ಬಲ ಬಂದಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮುಗಿಸಿರುವ ಸ್ಟಾರ್ ಆರಂಭಿಕ ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ ಕರ್ನಾಟಕ ತಂಡಕ್ಕೆ ಮರಳಿದ್ದು, ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಛತ್ತೀಸ್ಗಢ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಆಡಲಿದ್ದಾರೆ. ಮಯಾಂಕ್ ಅಗರ್ವಾಲ್ ತಂಡಕ್ಕೆ ಮರಳಿರುವ ಕಾರಣ ಅಭಿಷೇಕ್ ರೆಡ್ಡಿ 15ರ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ತೋರಿರುವ 28 ವರ್ಷದ ಮಯಾಂಕ್ ಅಗರ್ವಾಲ್ 85ರ ಸರಾಸರಿಯಲ್ಲಿ ಎರಡು ಶತಕಗಳ ಸಹಿತ 240 ರನ್ ಗಳಿಸಿದ್ದರು. ವಿಶಾಖಪಟ್ಟಣದಲ್ಲಿ ನಡೆದ ಪ್ರಥಮ ಟೆಸ್ಟ್ನಲ್ಲಿ ಮಯಾಂಕ್ ಭರ್ಜರಿ ದ್ವಿಶತಕ ಸಿಡಿಸಿದ್ದರು. ರಾಂಚಿಯಲ್ಲಿ ನಡೆದ 3ನೇ ಟೆಸ್ಟ್ ಪಂದ್ಯ 4ನೇ ದಿನದಾಟ ಆರಂಭಗೊಂಡ ಕೆಲವೇ ನಿಮಿಷಗಳಲ್ಲಿ ಮುಕ್ತಾಯಗೊಂಡು ಇನ್ನಿಂಗ್ಸ್ ಹಾಗೂ 202 ರನ್ಗಳಿಂದ ಭಾರತ ಗೆಲುವು ದಾಖಲಿಸಿತ್ತು. ಆ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿತ್ತು. ಟೆಸ್ಟ್ ಪಂದ್ಯ ನಾಲ್ಕನೇ ದಿನವೇ ಅಂತ್ಯಗೊಂಡಿರುವ ಕಾರಣ ಮಯಾಂಕ್ ಅಗರ್ವಾಲ್ ಅವರಿಗೆ ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿದೆ.

PC: BCCI/Teitter

ಬಲಗೈ ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ ತಂಡಕ್ಕೆ ಮರಳಿರುವ ಕಾರಣ ಕರ್ನಾಟಕ ತಂಡದ ಬ್ಯಾಟಿಂಗ್ ಬಲ ಹೆಚ್ಚಿದಂತಾಗಿದೆ. ಆರಂಭಿಕರಾಗಿ ಕೆ.ಎಲ್ ರಾಹುಲ್ ಮತ್ತು ದೇವದತ್ ಪಡಿಕಲ್ ಈಗಾಗಲೇ ಯಶಸ್ವಿಯಾಗಿದ್ದು, ಮೂರು ಅರ್ಧಶತಕದ ಜೊತೆಯಾಟಗಳು ಹಾಗೂ ಮುಂಬೈ ವಿರುದ್ಧ 137 ರನ್ಗಳ ಶತಕದ ಜೊತೆಯಾಟವಾಡಿದ್ದಾರೆ. ಹೀಗಾಗಿ ಈ ಬಲಗೈ-ಎಡಗೈ ಜೋಡಿಯನ್ನು ಬದಲಿಸುವ ಸಾಧ್ಯತೆ ಕಡಿಮೆ. ಹೀಗಾಗಿ ಮಯಾಂಕ್ ಅಗರ್ವಾಲ್ 3ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಗಳಿವೆ. 6 ಲೀಗ್ ಪಂದ್ಯಗಳಲ್ಲಿ 3ನೇ ಕ್ರಮಾಂಕದಲ್ಲಿ ಆಡಿದ್ದ ಮತ್ತೊಬ್ಬ ಸ್ಟಾರ್ ಬ್ಯಾಟ್ಸ್ಮನ್ ಕರುಣ್ ನಾಯರ್ ಕೇವಲ 66 ರನ್ ಗಳಿಸಿದ್ದು, ಅವರ ಬದಲು ಆಡುವ ಬಳಗದಲ್ಲಿ ಮಯಾಂಕ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here

six + 13 =