ಆರ್‌ಸಿಬಿ ಸೋತರೂ ‘ಶತಕ’ ಬಾರಿಸಿದ ವಿರಾಟ್ ಕೊಹ್ಲಿ..!

0
PC: Twitter

ಜೈಪುರ, ಏಪ್ರಿಲ್ 2: ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್-12ರಲ್ಲಿ ಸತತ 4ನೇ ಸೋಲು ಕಂಡಿದೆ. ಜೈಪುರದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲೂ ಆರ್ ಸಿ ಬಿ, ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಕಂಡಿತು.

ಈ ಸೋಲಿನ ಮಧ್ಯೆ ಆರ್ ಸಿ ಬಿ ನಾಯಕ ವಿರಾಟ್ ಕೊಹ್ಲಿ ಶತಕ ಬಾರಿಸಿದ್ದಾರೆ. ಆದರೆ ಈ ಶತಕ ಬಂದಿರುವುದು ಬ್ಯಾಟಿಂಗ್ ನಲ್ಲಲ್ಲ. ಬದಲಾಗಿ ನಾಯಕತ್ವದ ದಾಖಲೆಯಲ್ಲಿ. 100 ಐಪಿಎಲ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ದಾಖಲೆಗೆ ಕೊಹ್ಲಿ ಪಾತ್ರರಾಗಿದ್ದಾರೆ. 2011ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುತ್ತಿರುವ ವಿರಾಟ್ ಕೊಹ್ಲಿ ಅವರಿಗೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯ ನಾಯಕನಾಗಿ 100ನೇ ಪಂದ್ಯವಾಗಿದೆ. ಆದರೆ ಈ ಶತಕ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ ಅವರಿಗೆ ಸೋಲು ಎದುರಾಯಿತು.

100 ಐಪಿಎಲ್ ಪಂದ್ಯಗಳಲ್ಲಿ ನಾಯಕತ್ವ ವಹಿಸಿದ 3ನೇ ಆಟಗಾರನೆಂಬ ಹಿರಿಮೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್ ಧೋನಿ(162 ಪಂದ್ಯ) ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್(129) ಈ ಸಾಧನೆ ಮಾಡಿದ್ದರು.

100 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ತಂಡವನ್ನು ಮುನ್ನಡೆಸಿರುವ ವಿರಾಟ್ ಕೊಹ್ಲಿ, 44 ಗೆಲುವು ಕಂಡಿದ್ದರೆ 51 ಸೋಲು ಕಂಡದ್ದಾರೆ. 2 ಪಂದ್ಯಗಳು ಟೈಗೊಂಡಿದ್ದರೆ, ಉಳಿದ 3 ಪಂದ್ಯಗಳಲ್ಲಿ ಫಲಿತಾಂಶ ಬಂದಿಲ್ಲ. 8 ವರ್ಷಗಳಿಂದ ರಾಯಲ್ ಚಾಲೆಂಜರ್ಸ ತಂಡದ ನಾಯಕನಾಗಿರುವ ವಿರಾಟ್ ಕೊಹ್ಲಿ, ಒಮ್ಮೆಯೂ ತಂಡಕ್ಕೆ ಪ್ರಶಸ್ತಿ ಗೆದ್ದು ಕೊಟ್ಟಿಲ್ಲ.

LEAVE A REPLY

Please enter your comment!
Please enter your name here

3 + 19 =